ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖಾ ವರದಿ ಅಂಗೀಕರಿಸಿದ ಕಾಂಗ್ರೆಸ್ ಸರ್ಕಾರ

Prasthutha|

- Advertisement -

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ಅಂಗೀಕರಿಸಿದೆ.

ಮ್ಯಾಜಿಸ್ಟ್ರೇಟ್ ತನಿಖೆಯಲ್ಲಿ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗಿದೆ.

- Advertisement -

ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ಜಿಲ್ಲಾಧಿಕಾರಿಗಳು ವರದಿ ನೀಡಿದ್ದರು. ಪೊಲೀಸರ ಗೋಲಿಬಾರ್ ಕ್ರಮ ಸರಿ ಇದೆ ಎಂದು ಜಿಲ್ಲಾಧಿಕಾರಿ ವರದಿ ನೀಡಿದ್ದರು. ಅಂದು ಪೋಲಿಸರು ಗೋಲಿಬಾರ್ ಮಾಡಿರದಿದ್ದರೆ ಇಡೀ ಠಾಣೆ ಕಿಡಿಗೇಡಿಗಳು ಬೆಂಕಿಗೆ ಹಚ್ಚುತ್ತಿದ್ದರು. ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ರಿಪೋರ್ಟ್ ನೀಡಲಾಗಿತ್ತು. ಇನ್ನು 2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ವರದಿ ನೀಡಿತ್ತು. ಆಗ ವಿಪಕ್ಷದಲ್ಲಿದ್ದ ಕಾಂಗ್ರೆಸ್ ಮ್ಯಾಜಿಸ್ಟ್ರೇಟ್ ವರದಿಯನ್ನ ಟೀಕಿಸಿತ್ತು. ಚುನಾವಣಾ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನ ಟಾರ್ಗೆಟ್ ಮಾಡಿವೆ ಎಂದು ಕಾಂಗ್ರೆಸ್ ಟೀಕಿಸಿತ್ತು. ಈಗ ಅಧಿಕಾರಕ್ಕೆ ಬಂದ ಬಳಿಕ ರಿಪೋರ್ಟ್ ಒಪ್ಪಿಕೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ನಿರ್ಧಾರವನ್ನ ಒಪ್ಪಿ ರಾಜ್ಯಪತ್ರ ಹೊರಡಿಸಿದೆ.



Join Whatsapp