ಕಾಂಗ್ರೆಸ್ ಪಕ್ಷ ತೊರೆದ ಕೆಜಿಎಫ್ ಬಾಬು

Prasthutha|

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -


ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ತೊರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಪಕ್ಷದ ಇತ್ತೀಚಿನ ವಿದ್ಯಮಾನಗಳಿಂದ ಬೇಸತ್ತು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಕೊಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.


ಆದರೆ ಇದೀಗ ಚಿಕ್ಕಪೇಟೆಯಲ್ಲಿ ಆರ್. ವಿ ದೇವರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಕೆ.ಜಿ.ಎಫ್ ಬಾಬು ಕಾಂಗ್ರೆಸ್ ಪ್ರಾಥಮಿಕ ಸದಸ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಜಿಎಫ್ ಬಾಬು ನಿವಾಸದ ಮೇಲೆ ಬುಧವಾರ ಐಟಿ ದಾಳಿ ನಡೆದಿತ್ತು.

Join Whatsapp