KGF ಹಾಡು ಬಳಕೆ ವಿವಾದ: ಲಹರಿ ವೇಲು ವಿರುದ್ಧ ರಮ್ಯಾ ಕಿಡಿ

Prasthutha|

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ವೇಳೆ ಕೆಜಿಎಫ್-2 ಚಿತ್ರದ ಸಂಗೀತವನ್ನು ಅನುಮತಿ ಇಲ್ಲದೆ ಬಳಕೆ ಮಾಡಿದಕ್ಕೆ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಅವರು ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಮ್ಯಾ, ಲಹರಿ ವೇಲು ಬಿಜೆಪಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುವ ತಯಾರಿಯಲ್ಲಿದ್ದಾರೆಯೇ? ‘ತುಂಬಾ ಜನ ಜನಪ್ರಿಯ ಕೆಜಿಎಫ್ ಚಿತ್ರದ ಹಾಡುಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡಿದ್ದಾರೆ. ಅದಕ್ಕೆ ಆಕ್ಷೇಪ ಎತ್ತದ ಲಹರಿ ವೇಲು, ಕಾಂಗ್ರೆಸ್ ಬಳಸಿದರೆ ಮಾತ್ರ ಅವರಿಗೆ ಸಮಸ್ಯೆಯಾಗಿದೆ’ ಎಂದು ಕಿಡಿಕಾರಿದ್ದಾರೆ.

Join Whatsapp