Home ಟಾಪ್ ಸುದ್ದಿಗಳು ರಾಷ್ಟ್ರಕ್ಕಾಗಿ ಖಾದಿ, ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ರಾಹುಲ್ ವಾಗ್ದಾಳಿ

ರಾಷ್ಟ್ರಕ್ಕಾಗಿ ಖಾದಿ, ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ರಾಹುಲ್ ವಾಗ್ದಾಳಿ

ನವದೆಹಲಿ: ರಾಷ್ಟ್ರಕ್ಕಾಗಿ ಖಾದಿ, ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್. ಪ್ರಧಾನಿ ಮೋದಿ ಅವರ ಮಾತುಗಳಿಗೂ ಮತ್ತು ಅವರು ಮಾಡುವ ಕೆಲಸಗಳಿಗೂ ಒಂದಕ್ಕೊಂದು ಹೊಂದಾಣಿಕೆಯೇ ಆಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.


ಶನಿವಾರ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಖಾದಿ ಮಹತ್ವವನ್ನು ನೆನಪಿಸಿಕೊಳ್ಳುವ ಸಲುವಾಗಿ ಸಾಬರಮತಿ ನದಿ ತೀರದಲ್ಲಿಂದು ಆಯೋಜಿಸಿದ್ದ `ಖಾದಿ ಉತ್ಸವ’ದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಕನಸಿಗೆ ಖಾದಿ ಪ್ರಮುಖ ಶಕ್ತಿಯಾಗಿದೆ ಎಂದು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಟ್ವೀಟ್ ಮಾಡಿ ರಾಹುಲ್ ಗಾಂಧಿ ತಿರುಗೇಟು ನೀಡಿದ್ದು,‘ಖಾದಿ ಫಾರ್ ನೇಷನ್’ ಆದರೆ ಚೈನೀಸ್ ಪಾಲಿಸ್ಟರ್ ರಾಷ್ಟ್ರಧ್ವಜಕ್ಕೆ. ಪ್ರಧಾನಿಯವರು ಆಡುವ ಮಾತಿಗೂ ಮತ್ತು ಮಾಡುವ ಕೆಲಸಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Join Whatsapp
Exit mobile version