ಕರಾವಳಿ ಉತ್ಸವ ಮೈದಾನದಲ್ಲಿ ನ.26ರಿಂದ ಖಾದಿ ಉತ್ಸವ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮತ್ತು ಬೆಂಗಳೂರಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ – ಖಾದಿ ಉತ್ಸವ ಇದೇ ನ.26ರಿಂದ ಡಿಸೆಂಬರ್ 10ರ ವರೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು.

ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್. ನಾಗರಾಜು ಖಾದಿ ವಸ್ತುಪ್ರದರ್ಶನ ಮಳಿಗೆ ಉದ್ಘಾಟಿಸುವರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಖಾದಿ ನಡೆದು ಬಂದ ದಾರಿ ಚಿತ್ರ ಪ್ರಾತ್ಯಕ್ಷಿಕೆ ಉದ್ಘಾಟಿಸುವರು.

- Advertisement -

ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅಥಿತಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸಂಸದರಾದ ಡಾ. ಡಿ. ವಿರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಯು., ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಬಿ.ಎಂ. ಫಾರೂಕ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ ಸಿಂಹ ನಾಯಕ್ ಹಾಗೂ ಮಂಜುನಾಥ ಭಂಡಾರಿ, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮತ್ತು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅದ್ಯಕ್ಷರಾದ ಕೆ.ವಿ. ನಾಗರಾಜು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಪಂಕಜ್ ಕುಮಾರ್ ಪಾಂಡೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕಿ ಸಿ. ಸತ್ಯಭಾಮ, ಮಂಗಳೂರು ಮಹಾಪೌರ ಜಯಾನಂದ ಅಂಚನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತರಾದ ಅಕ್ಷಯ್ ಶ್ರೀಧರ್ ಹಾಗೂ ಬೆಂಗಳೂರಿನ ಖಾದಿ ಗ್ರಾಮೋದ್ಯೋಗ ಆಯೋಗದ ರಾಜ್ಯ ನಿರ್ದೇಶಕರಾದ ಡಾ. ಇ. ಮೋಹನ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.