ರಷ್ಯಾ ಯುದ್ಧಭೂಮಿಯಲ್ಲಿ ಕರ್ನಾಟಕದ ಯುವಕರು: ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಖರ್ಗೆ ಪತ್ರ

Prasthutha|

- Advertisement -

ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಕಲಬುರಗಿ ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

- Advertisement -

ಕಲಬುರಗಿ ಜಿಲ್ಲೆಯ ಮೂವರು ಯುವಕರು ಹಾಗೂ ತೆಲಂಗಾಣದ ಒಬ್ಬ ಯುವಕನಿಗೆ ಉದ್ಯೋಗದ ಆಮಿಷವೊಡ್ಡಿ ಇದೀಗ ಅವರನ್ನು ಬಲವಂತವಾಗಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ತಳ್ಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Join Whatsapp