‘INDIA’ದ ಮುಖ್ಯಸ್ಥರಾಗಿ ಖರ್ಗೆ: ಮೂಡಿದ ಒಮ್ಮತ

Prasthutha|

ನವದೆಹಲಿ: ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ ಮೂಡಿದೆ ಎಂದು ತಿಳಿದುಬಂದಿದೆ.

- Advertisement -

ಮೈತ್ರಿಕೂಟದ ನಾಯಕರು ವರ್ಚುಯಲ್ ಸಭೆ ನಡೆಸಿದ್ದು, ಮೈತ್ರಿಕೂಟದ ವಿವಿಧ ಅಂಶಗಳು ಹಾಗೂ 2024ರ ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತು ಚರ್ಚಿಸಿದ್ದಾರೆ. ತೃಣಮೂಲ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಸಮಾಜವಾದಿ ಪಕ್ಷದ ನಾಯಕರು ಸಭೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ಅವರನ್ನು ನೇಮಿಸುವ ಬಗ್ಗೆ ಒಮ್ಮತ ಮೂಡಿದೆ. ಈ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ ಎಂದು ಅದೇ ಮೂಲಗಳು ತಿಳಿಸಿವೆ.

- Advertisement -

ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗುವ ಸಾಧ್ಯತೆ ಇದೆ. ಆದರೆ ಸಭೆಯಲ್ಲಿ ಭಾಗವಹಿಸದ ಪ್ರತಿನಿಧಿಗಳನ್ನು ಸಂಪರ್ಕಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ಹೇಳಿವೆ.



Join Whatsapp