‘ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ ಚಾಲನೆ ನೀಡಿದ ಖರ್ಗೆ

Prasthutha|

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನ ‘ಘರ್ ಘರ್ ಗ್ಯಾರಂಟಿ’ ಅಭಿಯಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಬುಧವಾರ) ಚಾಲನೆ ನೀಡಿದರು. ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಕೈಥವಾಡದ ಉಸ್ಮಾನ್ಪುರದಿಂದ ಈ ಅಭಿಯಾನವನ್ನು ಮಲ್ಲಿಕಾರ್ಜುನ ಖರ್ಗೆ ಪ್ರಾರಂಭಿಸಿದರು.

- Advertisement -


‘ನಮ್ಮ ‘ಪಂಚ ನ್ಯಾಯ ಪಚ್ಚೀಸ್ ಗ್ಯಾರಂಟಿ’ ಅನ್ನು ಜನರಿಗೆ ತಲುಪಿಸಲು ಈ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದೇವೆ. ದೇಶದಾದ್ಯಂತ ಎಂಟು ಕೋಟಿ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸುವ ಯೋಜನೆ ಹೊಂದಿದ್ದೇವೆ. ನಾವು ನೀಡಿದ ಭರವಸೆಗಳನ್ನೆಲ್ಲ ಈಡೇರಿಸಲಿದ್ದೇವೆ ಎಂದು ಜನರಿಗೆ ತಿಳಿಸಲಿದ್ದೇವೆ’ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.



Join Whatsapp