Home ಟಾಪ್ ಸುದ್ದಿಗಳು ಮತದಾನ ಪ್ರಮಾಣದಲ್ಲಿ ವ್ಯತ್ಯಾಸ: ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಪತ್ರ ಬರೆದ ಖರ್ಗೆ

ಮತದಾನ ಪ್ರಮಾಣದಲ್ಲಿ ವ್ಯತ್ಯಾಸ: ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಪತ್ರ ಬರೆದ ಖರ್ಗೆ

ನವದೆಹಲಿ: ಲೋಕಸಭಾ ಚುನಾವಣೆಯ ಮತದಾನ ಪ್ರಮಾಣದಲ್ಲಿ ವ್ಯತ್ಯಾಸ ಕುರಿತಂತೆ ಚುನಾವಣಾ ಆಯೋಗದ ದತ್ತಾಂಶ ಕುರಿತು ಧ್ವನಿ ಎತ್ತುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಬಣದ ವಿವಿಧ ನಾಯಕರಿಗೆ ಪತ್ರ ಬರೆದಿದ್ದಾರೆ.

‘ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ನಮ್ಮ ಗುರಿಯಾಗಿದ್ದು, ಘೋಷಿತ ಮತದಾನ ಪ್ರಮಾಣದಲ್ಲಿ ವ್ಯತ್ಯಾಶ ಕಂಡುಬಂದರೆ ಧ್ವನಿ ಎತ್ತಿ’ ಎಂದು ಖರ್ಗೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
‘ಚುನಾವಣಾ ಆಯೋಗದ ಸ್ವಾತಂತ್ರ್ಯ ರಕ್ಷಿಸೋಣ ಮತ್ತು ಚುನಾವಣಾ ಆಯೋಗವನ್ನು ಹೊಣೆಗಾರನನ್ನಾಗಿ ಮಾಡೋಣ’ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.
‘ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಇಂಡಿಯಾ ಬಣದ ಸಾಮೂಹಿಕ ಜವಾಬ್ದಾರಿಯಾಗಿದೆ. ಈ ಕುರಿತಂತೆ ಚುನಾವಣಾ ಆಯೋಗವನ್ನು ಪ್ರಶ್ನಿಸಿ ಮತ್ತು ಅಂತಿಮ ಮತದಾನದ ಪ್ರಮಾಣದಲ್ಲಿ ವ್ಯತ್ಯಾಸ ಮಾಡುವುದಕ್ಕೆ ಅವಕಾಶ ಕೊಡಬೇಡಿ’ ಎಂದು ತಿಳಿಸಿದ್ದಾರೆ.

Join Whatsapp
Exit mobile version