ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ನಿರ್ಧರಿಸಿದ ಅಗ್ರ ಕುಸ್ತಿಪಟು: ಪ್ರಧಾನಿಗೆ ಪತ್ರ

Prasthutha|

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಾಗಿ ಮತ್ತು ಸಾಕ್ಷಿ ಮಲಿಕ್‌ಗೆ ಬೆಂಬಲ ಸೂಚಿಸಿ ಅಗ್ರ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಪ್ರಶಸ್ತಿಗಳನ್ನು ಹಿಂದಿರಿಗುವುದಾಗಿ ಘೋಷಿಸಿದ್ದಾರೆ. ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಘೋಷಿಸಿದ ಅವರು, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

- Advertisement -

ತಮ್ಮ ಹೋರಾಟವನ್ನು ವ್ಯಂಗ್ಯ ಮಾಡುವಂತೆ ಬ್ರಿಜ್ ಭೂಷಣ್ ಆಪ್ತ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದಾಗ ಕುಸ್ತಿಯಿಂದ ಸಾಕ್ಷೀ ಮಲಿಕ್ ನಿವೃತ್ತಿ ಘೋಷಿಸಿದ್ದರು. ಅದರ ಬೆನ್ನಿಗೆ ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀಯನ್ನು ಹಿಂದಿರುಗಿಸಿದ್ದರು. ಅದಾಗಿ ವಾರದೊಳಗೆ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದ ಮೂರನೇ ಅಗ್ರ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಅನೇಕ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿ ಪ್ರತಿಭಟಿಸಿದ್ದರು.

Join Whatsapp