Home ಟಾಪ್ ಸುದ್ದಿಗಳು ಕೆಐಎಡಿಬಿಯಿಂದ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ: ಸಚಿವ ಮುರುಗೇಶ್ ನಿರಾಣಿ

ಕೆಐಎಡಿಬಿಯಿಂದ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದಮೂಲಕ ಜಾರಿಗೊಳಿಸಿದೆ.

 ಭೂಪರಿಶೋಧನಾ ಸಮಿತಿಯಲ್ಲಿ (LAC) 10 ಎಕರೆವರೆಗಿನ ಭೂಮಿಹಂಚಿಕೆಗೆ ಪರಿಶೀಲನೆ ಅವಶ್ಯವಿಲ್ಲ ಎಂದು ಹೊಸ ಆದೇಶ ಸ್ಪಷ್ಟಪಡಿಸಿದೆ. ಹೂಡಿಕೆ ಪ್ರಸ್ತಾವನೆಗಳು ಈಗ ನೇರವಾಗಿ ರಾಜ್ಯಮಟ್ಟದ ಸಮಿತಿಯ ಮುಂದ ಮಂಡನೆಯಾಗಲಿವೆ.

 ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಗಳಿಗೆ ಅಗತ್ಯವಿರುವ ಭೂಮಿಯನ್ನು ಸುಲಭವಾಗಿ ನೀಡುವುದು ಇದರ ಮುಖ್ಯ ಉದ್ದೇಶ. ಸುಲಲಿತ ವ್ಯವಹಾರದಲ್ಲಿದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಕ್ಕೆ ಹೆಚ್ಚು ಹೆಚ್ಚುಉದ್ಯಮಗಳನ್ನುಆಕರ್ಷಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ.

 “10 ಎಕರೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಗಾಗಿ ಜಮೀನು ಪರಿಶೀಲನಾ ಸಮಿತಿಗೆ ಹೋಗುವ ಬದಲು ನೇರವಾಗಿ ಜಿಲ್ಲಾ ಅಥವಾರಾಜ್ಯ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆ ನೀಡುವುದರಿಂದ ಪ್ರಸ್ತಾವನೆಗಳಿಗೆ ತ್ವರಿತವಾಗಿ ಅನುಮೋದನೆ ದೊರೆಯುತ್ತದೆ. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮಉದ್ಯಮದಾರರಿಗೆ ಅನುಕೂಲವಾಗುವುದು,”ಎಂದು ಬೃಹತ್ ಮತ್ತುಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್. ನಿರಾಣಿ ಹರ್ಷವ್ಯಕ್ತಪಡಿಸಿದರು.

 ಬರುವ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ ಮಹತ್ವಾಕಾಂಕ್ಷೆಯ ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ) ಪೂರ್ವಭಾವಿಯಾಗಿ ಈ ನಿರ್ಧಾರವನ್ನು ಇಲಾಖೆ ಕೈಗೊಂಡಿದೆ.

 ಆದಾಗ್ಯೂ, ಹತ್ತು ಎಕರೆಗಿಂತ ಹೆಚ್ಚಿನ ವಿಸ್ತೀರ್ಣ ಮತ್ತು ರೂ.15 ಕೋಟಿಯಿಂದ ರೂ.500 ಕೋಟಿವರೆಗಿನ ಹೂಡಿಕೆಯ ಪ್ರಸ್ತಾವನೆಗಳನ್ನು ಭೂ ಲೆಕ್ಕ ಪರಿಶೋಧನಾ ಸಮಿತಿಯ ಮುಂದೆ ಮಂಡಿಸಬಹುದು, ಇಲ್ಲಿ ತೆರವು ಗೊಳಿಸಿದ ನಂತರ, ಅಂತಿಮಅನುಮೋದನೆಗಾಗಿ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿಯ ಮುಂದೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು.

Join Whatsapp
Exit mobile version