ಕಿಚ್ಚ ಸುದೀಪ್ -ಡಿ.ಕೆ.ಶಿವಕುಮಾರ್ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

Prasthutha|

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

- Advertisement -


ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇಬ್ಬರು ಭೇಟಿಯಾಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.


ಮಾಹಿತಿ ಪ್ರಕಾರ, ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ಸುದೀಪ್ ಗೆ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಸುದೀಪ್ ಕಾಂಗ್ರೆಸ್ ಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿವೆ.ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜರ್ನಿ ಶುರುಮಾಡುತ್ತಾರೆ ಎಂಬ ವದಂತಿ ಇದೆ. ಈ ಗಾಳಿ ಸುದ್ದಿ ಬೆನ್ನಲ್ಲೇ, ಡಿಕೆ ಶಿವಕುಮಾರ್-ಸುದೀಪ್ ಭೇಟಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

Join Whatsapp