ಸೂರತ್: ಅಪಹರಣಕ್ಕೀಡಾಗಿದ್ದರು ಎನ್ನಲಾದ ಸೂರತ್ (ಪೂರ್ವ) ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರು ಮುಂಬರುವ ಅಸೆಂಬ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದು, ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ಎಎಪಿ ಅಭ್ಯರ್ಥಿ ಜರಿವಾಲಾ ಅವರನ್ನು ಬಿಜೆಪಿಯವರು ಅಪಹರಿಸಿದ್ದಾರೆ ಮತ್ತು ಅವರ ನಾಮಪತ್ರವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎಂದು ಎಎಪಿ ಆರೋಪಿಸಿತ್ತು. ಇದರ ಬೆನ್ನಲ್ಲೆ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಕಾಂಚಾನ್ ಜರಿವಾಲಾ ಅವರು ನಿನ್ನೆ ಚುನಾವಣಾ ಅಧಿಕಾರಿ ಕಚೇರಿಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸುವ ಯತ್ನ ನಡೆಸಲಾಗಿತ್ತು. ಆ ಬಳಿಕ ಅವರ ನಾಮಪತ್ರವನ್ನು ಹಿಂಪಡೆಯುವಂತೆ ಒತ್ತಡ ಹಾಕಲಾಗಿತ್ತು ಎನ್ನಲಾಗಿದೆ. ಇದು ಚುನಾವಣಾ ಆಯೋಗದ ನಡೆಯ ವಿರುದ್ಧ ಹಲವು ಸಂಶಯ ಹುಟ್ಟುಹಾಕಿದೆ ಎಂದು ಸಿಸೋಡಿಯಾ ಟ್ವೀಟ್’ನಲ್ಲಿ ತಿಳಿಸಿದ್ದಾರೆ.