ಜೈಪುರ: ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ತೇಲಿಯ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ. ವಿಧಾನಸಭಾ ಚುನಾವಣೆಗೆ ಮುನ್ನ ಕೇಸರಿ ಪಕ್ಷವು ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬದಲಿಗೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಪ್ರಕರಣವನ್ನು ನಿರ್ವಹಿಸಿದ್ದರೆ, ತನಿಖೆ ತಾರ್ಕಿಕವಾಗಿ ಸಾಗುತ್ತಿತ್ತು” ಎಂದು ಹೇಳಿದರು.