ಗೋ ಕಳ್ಳಸಾಗಣೆದಾರನೆಂದು ಆರೋಪಿಸಿ ವಿದ್ಯಾರ್ಥಿಯ ಹತ್ಯೆ: ಐವರು ಸಂಘಪರಿವಾರದ ಕಾರ್ಯಕರ್ತರ ಬಂಧನ

Prasthutha|

- Advertisement -

ಆರ್ಯನ್ ಮಿಶ್ರಾ ಮೃತ ವಿದ್ಯಾರ್ಥಿ

ಚಂಡೀಗಢ: ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರನೆಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಕಾರಿನಲ್ಲಿ ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ

- Advertisement -

ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ವಿದ್ಯಾರ್ಥಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಜಾನುವಾರು ಕಳ್ಳಸಾಗಾಣಿಕೆದಾರರನ್ನು ಹುಡುಕುತ್ತಿದ್ದಾಗ ಪಟೇಲ್ ಚೌಕ್‌ನಲ್ಲಿ ಡಸ್ಟರ್ ಕಾರನ್ನು ನೋಡಿದ್ದಾರೆ. ನಂತರ ಕಾರು ಚಾಲಕ ಹರ್ಷಿತ್ ನನ್ನು ನಿಲ್ಲಿಸುವಂತೆ ಹೇಳಿದರು. ಆದಾಗ್ಯೂ, ಆರ್ಯನ್ ಮತ್ತು ಅವನ ಸ್ನೇಹಿತರು ನಿಲ್ಲಿಸಿರಲಿಲ್ಲ.

ಆರೋಪಿಗಳು ಕಾರಿನತ್ತ ಗುಂಡು ಹಾರಿಸಿದರು ಮತ್ತು ಗುಂಡು ಪ್ರಯಾಣಿಕರ ಸೀಟಿನಲ್ಲಿದ್ದ ಆರ್ಯನ್ – ಕುತ್ತಿಗೆಗೆ ತಗುಲಿತು. ಅಂತಿಮವಾಗಿ ಕಾರು ನಿಲ್ಲಿಸಿದಾಗ ಮತ್ತೆ ಗುಂಡು ಹಾರಿಸಲಾಯಿತು. ಆರೋಪಿಗಳು ಕಾರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನು ನೋಡಿದಾಗ, ಅವರು ತಪ್ಪಾದ ವ್ಯಕ್ತಿಗೆ ಗುಂಡು ಹಾರಿಸಿರುವುದು ಗೊತ್ತಾಗಿದೆ ಬಳಿಕ ಓಡಿ ಹೋಗಿದ್ದಾರೆ.

ಆರ್ಯನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಒಂದು ದಿನದ ನಂತರ ಸಾವನ್ನಪ್ಪಿದ್ದಾರೆ.



Join Whatsapp
Exit mobile version