ನವದೆಹಲಿ: ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳನ್ನು ಎದುರಿಸಲು ಸರ್ವಪಕ್ಷಗಳ ಸಭೆ ಕರೆದು ಸಲಹೆಗಳನ್ನು ತೆಗೆದುಕೊಳ್ಳುವಂತೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ, “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇನೆ, ನಿಮ್ಮ ಅಹಂ ಅನ್ನು ಬದಿಗಿರಿಸಿ ಮತ್ತು ಸರ್ವಪಕ್ಷಗಳ ಸಭೆಯನ್ನು ಕರೆಯಿರಿ. ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಎಲ್ಲರಿಂದಲೂ ಸಲಹೆಗಳನ್ನು ಪಡೆಯಿರಿ” ಎಂದು ಹೇಳಿದರು.