ಕಿನ್ನಿಗೋಳಿ: ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ.
ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಎಂಬವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಹಿಲಾಲ್ (16 )ಮೃತ ಬಾಲಕ ಎಂದು ಗುರುತಿಸಲಾಗಿದೆ.
ಹಿಲಾಲ್’ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.