ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ | ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕೊಲೆ: ತಪ್ಪೊಪ್ಪಿಕೊಂಡ ಆರೋಪಿ ಕಿರಣ್

Prasthutha|

ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ ಎನ್ನುವಾತನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ.

- Advertisement -


4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು. ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು.


ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡಿದ್ದ ಕಿರಣ್, ಶನಿವಾರ ಪ್ರತಿಮಾ ಅವರ ಮನೆಗೆ ತೆರಳಿದ್ದ ಕಿರಣ್, ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದಾನೆ. ಅಲ್ಲದೇ ಪ್ರತಿಮಾರ ಕಾಲಿಗೆ ಬಿದ್ದು ಪರಿ ಪರಿಯಾಗಿ ಬೇಡಿಕೊಂಡಿದ್ದಾನೆ. ಆದರೂ ಸಹ ಪ್ರತಿಮಾ ಒಪ್ಪಿರಲಿಲ್ಲ. ಇದರಿಂದ ಕಿರಣ್, ವೈರ್ ಮಾದರಿಯ ವಸ್ತುದಿಂದ ಪ್ರತಿಮಾ ಕುತ್ತಿಗೆಗೆ ಬಿಗಿದಿದ್ದಾನೆ. ಬಳಿಕ ಪ್ರತಿಮಾ ನೆಲಕ್ಕೆ ಬಿದ್ದ ಮೇಲೆ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಈ ಕೃತ್ಯ ಎಸಗಿದ ನಂತರ ಚಾಮರಾಜನಗರದತ್ತ ಪರಾರಿಯಾದ್ದ. ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಕಿರಣ್ನ ಫೋನ್ ಸಿಗ್ನಲ್ ಆಧರಿಸಿ ಕೊನೆಗೆ ಮಹದೇಶ್ವರಬೆಟ್ಟದಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.



Join Whatsapp