ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Prasthutha|

ಬೆಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

- Advertisement -


ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ವೇಳೆ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಪರಿಷತ್ ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್ನ ಸದಸ್ಯರು ಉಪಸ್ಥಿತರಿದ್ದರು.


ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಈ ಚುನಾವಣೆ ನಡೆದಿತ್ತು. ಕಿಶೋರ್ ಕುಮಾರ್ 1600ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದು, ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್ ನ ರಾಜು ಪೂಜಾರಿ ಪರಾಭವಗೊಂಡಿದ್ದರು.




Join Whatsapp