Home ಜಾಲತಾಣದಿಂದ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿರುವ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ

ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿರುವ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ

ದಾವಣಗೆರೆ: ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಅಡುಗೆ ಸಲಕರಣೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಡಜ್ಜಿ ಹನಮಂತಪ್ಪ ಎಂಬುವರ ವಿರುದ್ಧ ದೂರು ದಾಖಲಾಗಿದೆ.

Join Whatsapp
Exit mobile version