ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -


“ಕಿತ್ತೂರು ವಿಜಯೋತ್ಸವದ ಜ್ಯೋತಿ”ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.


ಚಾಲನೆ ನೀಡಿ ಮಾತನಾಡಿದ ಅವರು, 2024ರ ಕಿತ್ತೂರು ಚೆನ್ನಮ್ಮ ಉತ್ಸವ ಇದೇ ತಿಂಗಳ 23, 24 ಹಾಗೂ 25 ರಂದು ಕಿತ್ತೂರಿನಲ್ಲಿ ನಡೆಯಲಿದ್ದು, ಕಿತ್ತೂರು ವಿಜಯವಾಗಿ 200 ವರ್ಷಗಳಾಗುತ್ತವೆ. ಇದರ ಅಂಗವಾಗಿ ಇಂದು ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಿತ್ತೂರು ವಿಜಯೋತ್ಸವದ ಜ್ಯೋತಿಯು ಇಲ್ಲಿಂದ ಹೊರಟು ಎಲ್ಲಾ ಜಿಲ್ಲೆಗಳ ಮೂಲಕ ಹಾದು ಕಿತ್ತೂರನ್ನು ತಲುಪಲಿದೆ ಎಂದರು.

- Advertisement -


ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರೆಂದರೆ ಅದು ಕಿತ್ತೂರು ರಾಣಿ ಚನ್ನಮ್ಮ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮನ ಸೈನ್ಯದಲ್ಲಿದ್ದರು. ಬ್ರಿಟಿಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದು ತಿಳಿಸಿದರು.



Join Whatsapp