IPL 2021 | ಇಂದು ಕೆಕೆಆರ್ – ಚೆನ್ನೈ ಫೈನಲ್ ಫೈಟ್

Prasthutha|

ದುಬೈ: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇಂದು ಅಂತಿಮ ಹಂತ ತಲುಪಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಫೈಟ್ ನಡೆಸಲಿದೆ. ಉಭಯ ತಂಡಗಳು ಐಪಿಎಲ್ ನಲ್ಲಿ ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿ ಆಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 17 ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 9 ಪಂದ್ಯಗಳಲ್ಲಿ ಗೆಲುವನ್ನು ಕಂಡಿವೆ.

- Advertisement -

ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಗೇರಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಬಾರಿ ಚಾಂಪಿಯನ್ ಆಗುವ ತವಕದಲ್ಲಿದೆ. ಇತ್ತ ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಫೈನಲ್ ತಲುಪಿರುವ ಕೆಕೆಆರ್ ಕೂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಲಿದೆ.

ಒಪನರ್ಗಳ ಬಲ ಮತ್ತು ಸ್ಪಿನ್ನರ್ಗಳ ಕೈಚಳಕವೇ ಕೋಲ್ಕತ್ತಾ (KKR) ತಂಡದ ಆಸ್ತಿ ಎಂದು ವಿಶ್ಲೇಷಕರು ಬಣ್ಣಿಸಿದ್ದರೆ. ಇತ್ತ ಚೆನ್ನೈ ಕೂಡ ಆರಂಭಿಕರನ್ನೇ ಹೆಚ್ಚಾಗಿ ನೆಚ್ಚಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯಾಕೂಟ ನಡೆಯಲಿದೆ.



Join Whatsapp