ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಿಂದ ನಾಯಕ ರಾಹುಲ್ ಔಟ್

Prasthutha|

ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಮಹತ್ವದ ಟಿ-20 ಸರಣಿ ಆರಂಭವಾಗುವುದಕ್ಕೂ ಒಂದು ದಿನ ಮೊದಲೇ ಭಾರತಕ್ಕೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಟಿ-20 ಸರಣಿಯಲ್ಲಿ ಭಾರತದ ನಾಯಕತ್ವ ವಹಿಸಿದ್ದ ಕೆ.ಎಲ್.ರಾಹುಲ್ ಮತ್ತು ಸ್ಪಿನ್ನರ್ ಕುಲ್ದೀಪ್ ಯಾದವ್ ಅಭ್ಯಾಸದ ವೇಳೆ ಗಾಯಗೊಂಡು ಟೂರ್ನಿಯಿಂದಲೇ ಹೊರನಡೆದಿದ್ದಾರೆ. 

- Advertisement -

ʻನಾಯಕ ಕೆಎಲ್ ರಾಹುಲ್ ಸ್ನಾಯು ಸೆಳೆತದ ಕಾರಣದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆʼ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. ರಾಹುಲ್ ಸ್ಥಾನಕ್ಕೆ ಕೀಪರ್ ರಿಷಭ್ ಪಂತ್ರನ್ನು ನಾಯಕನಾಗಿ ನೇಮಿಸಲಾಗಿದೆ. ಈ ಹಿಂದೆ ಪ್ರಕಟಿಸಲಾದ ತಂಡದಲ್ಲಿ ಪಂತ್ ಉಪನಾಯಕನಾಗಿದ್ದರು. ಇದೀಗ ಹಾರ್ದಿಕ್ ಪಾಂಡ್ಯ ಉಪನಾಯಕನ ಸ್ಥಾನ ಪಡೆದುಕೊಂಡಿದ್ದಾರೆ.

ದಕ್ಕೂ ಮೊದಲು ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾರಿಗೆ ವಿಶ್ರಾಂತಿ ನೀಡಲಾದ ಕಾರಣ ನಾಯಕತ್ವದ ಜವಾಬ್ದಾರಿಯನ್ನು ಕೆ.ಎಲ್. ರಾಹುಲ್ ಸ್ವೀಕರಿಸಿದ್ದರು. ಆದರೆ, ಇದೀಗ ರಾಹುಲ್ ಟೂರ್ನಿಯಿಂದಲೇ ಹೊರನಡೆದಿದ್ದಾರೆ. 

- Advertisement -

ಹರಿಣಗಳ ವಿರುದ್ಧದ 5 ಟಿ-20ಪಂದ್ಯಗಳ ಸರಣಿಯ ಮೊದಲ ಪಂದ್ಯ ಗುರುವಾರ, ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಟೀಮ್ ಇಂಡಿಯಾದ ಆಟಗಾರರು ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದರು. ಸಂಜೆ ಹೊತ್ತು ಅಭ್ಯಾಸ ನಡೆಸುತ್ತಿದ್ದ ವೇಳೆ ಕೆಎಲ್ ರಾಹುಲ್ ಬಲ ತೊಡೆ ಸಂದುಗೆ ತೀವ್ರ ಪೆಟ್ಟು ಬಿದ್ದಿದೆ. ಮತ್ತೋರ್ವ ಆಟಗಾರ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡ ಗಾಯದ ಸಮಸ್ಯೆಗೊಳಗಾಗಿ ಸರಣಿಯಿಂದ ಹೊರಬಿದ್ದಿದ್ದಾರೆ.

ಸಂಭಾವ್ಯ ತಂಡ 
ಭಾರತ ತಂಡ : ರಿಷಭ್ ಪಂತ್ (ನಾಯಕ) (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ಉಪನಾಯಕ ), ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್ , ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ದ.ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ತಬ್ರೈಜ್ ಶಂಬ್ಡರ್, ಟ್ರೈಸ್ಸೆ ಸ್ಟಬ್ಡರ್, ರಸ್ಸಿ ವಾನ್ಡರ್ ಡಸೆನ್ , ಮಾರ್ಕೊ ಜಾನ್ಸೆನ್

Join Whatsapp