ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಅಪಘಾತಕ್ಕೆ ಬಲಿ

Prasthutha|

ಕುಂದಾಪುರ : ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಬುಧವಾರ ಮಧ್ಯಾಹ್ನ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಸಿದ್ದಾಪುರ ಬಳಿ ಅಪಘಾತ ಸಂಭವಿಸಿದೆ.

ಶಂಕರನಾರಾಯಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಹಾಲಾಡಿ ಸೇತುವೆ ಬಳಿ ಅವರ ಕಾರು ಸೇತುವೆಗೆ ಢಿಕ್ಕಿ ಹೊಡೆದಿದೆ. ಮಣಿಪಾಲದ ಖಾಸಗಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

ಪ್ರಗತಿಪರ ಕೃಷಿಕರಾಗಿದ್ದ ಶೆಟ್ಟಿ ಅವರು, ಸಹಕಾರಿ ಸಂಘಗಳು, ಗ್ರಾಮ ಪಂಚಾಯತಿ ಚುನಾವಣೆ, ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯವಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

- Advertisement -