Home ಟಾಪ್ ಸುದ್ದಿಗಳು ಹಾಲಿನ ದರ ಹೆಚ್ಚಿಸಲು ಕೆಎಂಎಫ್ ನಿಂದ ಸರ್ಕಾರಕ್ಕೆ ಮನವಿ

ಹಾಲಿನ ದರ ಹೆಚ್ಚಿಸಲು ಕೆಎಂಎಫ್ ನಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹ 3 ಹೆಚ್ಚಿಸಲು ಕೆಎಂಎಫ್ ತೀರ್ಮಾನಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹಾಲಿನ ದರ ಹೆಚ್ಚಿಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.  ಆದರೆ, ದರ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದ ಬಳಿಕವೇ ಈ ನಿರ್ಧಾರ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಂಟು ತಿಂಗಳಿಂದ ದರ ಹೆಚ್ಚಿಸುವಂತೆ 14 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಮೇಲೆ ಒತ್ತಡ ಹೇರಿದ್ದವು. ಅಧ್ಯಕ್ಷರು ಮನವಿ ಮಾಡಿದ್ದರೂ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರಲಿಲ್ಲ. ರೈತರ ಅನುಕೂಲಕ್ಕಾಗಿ ಈಗ ದರ ಹೆಚ್ಚಿಸಲು ತೀರ್ಮಾನಿಸಿದೆ ಎಂದು ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

Join Whatsapp
Exit mobile version