Home ಟಾಪ್ ಸುದ್ದಿಗಳು ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ ಕಷ್ಟಕರವಾಗಿದ್ದು, ಜ್ಞಾನಭಾಗ್ಯವನ್ನು ನೀಡಬೇಕೆಂದು ನಿಯೋಗ ಕೋರಿತು. ಬಿಬಿಎಂಪಿ ವತಿಯಿಂದ 600 ಕೋಟಿ ರೂ.ಗಳು ಸೆಸ್ ಬಾಕಿ ಇದೆ. ಗ್ರಂಥಾಲಯಗಳ ಶೇ 6 ರಷ್ಟು ಸೆಸ್ ಮೊತ್ತವನ್ನು ಸಂಗ್ರಹ ಮಾಡುತ್ತಿದ್ದು, ಅದನ್ನು ಗ್ರಂಥಾಲಯ ಲೆಕ್ಕಶೀರ್ಷಿಕೆಗೆ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು.

ನಿಯೋಗದಲ್ಲಿ ಸಪ್ನಾ ಬುಕ್ ಹೌಸ್, ನಿರಂತರ ಪ್ರಕಾಶನ, ಗೀತಾಂಜಲಿ ಪ್ರಕಾಶನ, ಸೇರಿದಂತೆ ಹಲವು ಪ್ರಕಾಶನ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

Join Whatsapp
Exit mobile version