ಮಂಗಳೂರು: ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ(ಕೊಚಿಮುಲ್) ಉದ್ಯೋಗ ನೇಮಕಾತಿಯಲ್ಲಿ ಆಗಿರುವ ಹಗರಣದ ತನಿಖೆ ಮಂಗಳೂರಿಗೂ ವಿಸ್ತರಣೆಯಾಗಿದ್ದು, ಮಂಗಳೂರು ವಿವಿಯಲ್ಲಿ ಇಡಿ ಅಧಿಕಾರಿಗಳು ದಿಢೀರ್ ಪರಿಶೀಲನೆ ಕೈಗೊಂಡಿದ್ದಾರೆ.
ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನ ವಿಚಾರಣೆ ನಡೆಸಿದೆ ಎಂದು ತಿಳೀದು ಬಂದಿದೆ. ಅಲ್ಲದೆ, ಮಂಗಳೂರು ವಿವಿಯ ಅಧಿಕೃತ ಮೈಲ್, ಪ್ರಮುಖ ಅಧಿಕಾರಿಗಳ ಮೊಬೈಲ್, ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ.