ಕೊಡಗು: ಗೂಡ್ಸ್ ಲಾರಿಯಿಂದ ದ್ರವ ಸೋರಿಕೆ ಪ್ರಕರಣ: ಲಾರಿ ವಶಪಡಿಸಿಕೊಂಡ ಪೊಲೀಸರು

Prasthutha|

►ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ಡಿ.ಎಚ್.ಓ

- Advertisement -

ಮಡಿಕೇರಿ: ಚಲಿಸುತ್ತಿದ್ದ ಲಾರಿಯಿಂದ ಕೆಂಪು ಬಣ್ಣದ ದ್ರವ ಸೋರಿಕೆಯಾಗಿರುವ ಪರಿಣಾಮ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿರುವ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದ ಅಧಿಕಾರಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಬಳಿಕ ಸ್ಥಳೀಯ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ವೆಂಕಟೇಶ್,  ಟ್ಯಾಂಕರ್ ನಿಂದ ಕೆಂಪು ಬಣ್ಣದ ದ್ರವ ಸೋರಿಕೆಯಾಗಿ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಹಾಗೂ ಇಂಜೆಕ್ಷನ್ ನೀಡಲಾಗಿದೆ. ಈಗ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಘಟನೆಯ ಬಗ್ಗೆ ಆಹಾರ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಕೊಡಗು – ಕೇರಳ ಗಡಿ ಭಾಗವಾದ ಪೆರುಂಬಾಡಿಯಲ್ಲಿ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಗೂಡ್ಸ್  ಲಾರಿ ಹೋಗಿರುವ ಮಾರ್ಗದಲ್ಲಿರುವ ಸಾರ್ವಜನಿಕರ ಆರೋಗ್ಯ ತಪಾಸಣೆಗೆ ಈಗಾಗಲೇ ತಂಡವನ್ನು ರಚಿಸಲಾಗಿದೆ. ಯಾರಿಗಾದರೂ ಆರೋಗ್ಯ ಸಮಸ್ಯೆ ಎದುರಾದರೆ ಚಿಕಿತ್ಸೆಗೆ ಬೇಕಾದ ಎಲ್ಲಾ ಸಿದ್ಧತೆಯನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.



Join Whatsapp