Home Uncategorized ಕೊಡಗು: ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ಎಡಿಸಿ ಮನವಿ

ಕೊಡಗು: ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ಎಡಿಸಿ ಮನವಿ

ಮಡಿಕೇರಿ: ಹದಿನೆಂಟು ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮನವಿ ಮಾಡಿದ್ದಾರೆ.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ 18-19 ವರ್ಷದ ಯೋಜಿತ ಗಣತಿ ಪ್ರಕಾರ 16,674 ಇದ್ದು, ಇಲ್ಲಿಯವರೆಗೆ 08 ರ ಕರಡು ಮತದಾರರ ಪಟ್ಟಿಯಂತೆ ಕೇವಲ 5,841 ಮಾತ್ರ 18-19 ವರ್ಷದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದಾರೆ. ಆದ್ದರಿಂದ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವಂತಾಗಲು ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಶ್ರಮಿಸುವಂತೆ ಕೋರಿದರು.


ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲು ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರು ಮೊಬೈಲ್ನಲ್ಲಿ ಮತದಾರರ ಸಹಾಯವಾಣಿ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಮತ್ತು ಮತದಾರರ ಸಹಾಯವಾಣಿ ಆಪ್ ನಲ್ಲಿ ಹಾಗೂ ವೆಬ್ಸೈಟ್ ಮೂಲಕ ಆನ್ ಲೈನ್ ನಲ್ಲಿ ನಮೂನೆ 6, 6ಎ, 7, 8 ಮತ್ತು 8ಎನ್ನು ಸಲ್ಲಿಸಬಹುದಾಗಿದೆ ಎಂದು ರಾಜು ಮೊಗವೀರ ಹೇಳಿದರು

Join Whatsapp
Exit mobile version