ಮಡಿಕೇರಿ: ಇನೋವಾ ಕಾರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಕೋನ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ನಡೆದಿದೆ.
ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು, ಸುಂಟಿಕೊಪ್ಪ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೈತ ಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಕೇರಳದ ಕಣ್ಣೂರು ಜಿಲ್ಲೆಯ ಕಾಡಾಚ್ಚಿರ ನಿವಾಸಿ ಶಾನಿಲ್ ಎಂದು ಗುರುತಿಸಲಾಗಿದೆ. ಕಣ್ಣೂರು ಕಾಪಾಡ್ ನಿವಾಸಿ ರಫ್ಶಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದರು.