ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಂಭಿರ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮದ್ಯೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಕೊಡಗರಹಳ್ಳಿ ನಿವಾಸಿ ಅಜೀಜ್ ಮತ್ತು ಮೈಮೂನ ದಂಪತಿಗಳ ಪುತ್ರ ಮೊಹಮ್ಮದ್ ಫಾಜಿಲ್ (6) ಮೃತಪಟ್ಟ ಬಾಲಕ.
ಕೊಡಗರಹಳ್ಳಿಯ ನಿವಾಸಿ ನವೀನ್ ಎಂಬಾತನ ಅಜಾರುಕತೆಯೇ ಚಾಲನೆಯೇ ಈ ಅವಘಡಕ್ಕೆ ಕಾರಣವಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟೊ ಚಾಲಕನನ್ನು ಪೊಲೀಸರು ಬಂಧಿಸಿ, ಆಟೋವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.