Home ಮಲೆನಾಡು ಕೊಡಗು: ಹೆಲ್ಮೆಟ್ ದರಿಸಿ ಸಭೆಯಲ್ಲಿ ಭಾಗವಹಿಸಿದ ಸಿಪಿಐಎಂ ಮುಖಂಡ

ಕೊಡಗು: ಹೆಲ್ಮೆಟ್ ದರಿಸಿ ಸಭೆಯಲ್ಲಿ ಭಾಗವಹಿಸಿದ ಸಿಪಿಐಎಂ ಮುಖಂಡ

ಮಡಿಕೇರಿ: ಸಿದ್ದಾಪುರ ಗ್ರಾಮ ಪಂಚಾಯತಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಸಿಪಿಐಎಂ ಪಕ್ಷದ ಮುಖಂಡ ಎಚ್.ಬಿ ರಮೇಶ್ ಅವರು ಹೆಲ್ಮೆಟ್ ಧರಿಸಿ ಸಭೆಯಲ್ಲಿ ಭಾಗವಹಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದರು.


ಸಿದ್ದಾಪುರ ಗ್ರಾಮ ಪಂಚಾಯತಿಯ ಸಭಾಂಗಣದ ಮೇಲ್ಛಾವಣಿ ಅಪಾಯದ ಹಂತದಲ್ಲಿದೆ. ಇದರ ಬಗ್ಗೆ ಹಿಂದಿನ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರೂ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ತೋರಿದ್ದಾರೆ. ಹಾಗಾಗಿ ಹೆಲ್ಮೆಟ್ ಧರಿಸಿ ಸಭೆಯಲ್ಲಿ ಭಾಗವಹಿಸಿರುವುದಾಗಿ ರಮೇಶ್ ತಿಳಿಸಿದರು.

Join Whatsapp
Exit mobile version