ಮಳೆ ಹೆಚ್ಚಳ ಸಾಧ್ಯತೆ; ಪ್ರಕೃತಿ ವಿಕೋಪ ಎದುರಿಸಲು ಕೊಡಗು ಜಿಲ್ಲಾಡಳಿತ ಸಜ್ಜು

Prasthutha|

ಕೊಡಗು: ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

- Advertisement -

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ.

Join Whatsapp