ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Prasthutha|

ಕೊಡಗು:  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಡಿ ತನಿಖೆಗೆ ಒಳಪಡಿಸುವ ಮೂಲಕ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ರಾಜಕೀಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

- Advertisement -

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುವ ಮೂಲಕ ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಹಿಳಾ ಅಧ್ಯಕ್ಷೆ ಸುರಯ್ಯ ಅಬ್ರಾರ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಎ.ಎಸ್.ಪೊನ್ನಣ್ಣ, ಡಾ.ಮಂಥ ಗೌಡ, ಕೆ.ಕೆ.ಮಂಜುನಾಥ್ ಕುಮಾರ್, ವಕ್ಸ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಕೆ.ಎ.ಯಾಕುಬ್, ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



Join Whatsapp