ಕೊಡಗು: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆಯನ್ನು ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಇಂದು ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಶಿಲ್ಪಾ ಸೀತಮ್ಮ (40)ಮೃತರು. ಆಕೆಯ ಪತಿಯೇ ನಾಯಕಂಡ ಬೋಪಣ್ಣ (45) ಹತ್ಯೆ ಮಾಡಿದ ಅರೋಪಿ. ಕೊಲೆ ನಡೆಸಿದ ನಂತರ ಆರೋಪಿ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ.
ಶಿಲ್ಪಾ ಸೀತಮ್ಮ 2012ರಿಂದ 2017ರವರೆಗೆ ಬೇಟೋಳಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.