ಕೊಡಗು: ಹಾಕತ್ತೂರಿನಲ್ಲಿ ಆರೋಗ್ಯ ಶಿಬಿರ

Prasthutha|

ಮಡಿಕೇರಿ: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿನಿಯರ ವಿಭಾಗ, ಹಾಕತ್ತೂರು ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಹಾಕತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣೆ ಶಿಬಿರವು ಹಾಕತ್ತೂರಿನ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು.

- Advertisement -

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಮತ್ತು ಶಾಲಾ ಮಕ್ಕಳಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು. ಡಾ. ಡೇವಿನ್ ಕರ್ಕಡ, ಡಾ. ವಿಜಯ ಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

  ಶಾಲಾ ಮುಖ್ಯೋಪಾಧ್ಯಾಯ ಟಿ.ಪಿ ಸ್ವಾಮಿ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಹಾರಿಸ್, ಹಾಕತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಯತೀಶ್ ಮತ್ತು ಶಾಲಾ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

Join Whatsapp