Home ಟಾಪ್ ಸುದ್ದಿಗಳು ಕೊಡಗು: ಮುಂದುವರಿದ ಮಳೆ ಆರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ

ಕೊಡಗು: ಮುಂದುವರಿದ ಮಳೆ ಆರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಮಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರಿ ಹೆಚ್ಚಳವಾಗಿದ್ದು, ಜಲಾಶಯದಿಂದ 16 ಸಾವಿರ ಕ್ಯುಸೆಕ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.

ಕುಶಾಲನಗರದ ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಸಾಯಿ ಬಡಾವಣೆ, ಕುವೆಂಪು ಬಡಾವಣೆ ಸೇರಿ ಹಲವು ಬಡಾವಣೆಗಳು ಜಲಾವೃತವಾಗಿವೆ.

ಚೇರಳ ಶ್ರೀಮಂಗಲದಲ್ಲಿ ಹಾಗೂ ನೆಲ್ಯಹುದಿಕೇರಿ ಎಂ.ಜಿ ಕಾಲನಿಯಲ್ಲಿ ಭಾರಿ ಮಳೆಗೆ ಮನೆ ಕುಸಿದಿದೆ. ಜಿಲ್ಲೆಯ ವಿವಿಧೆಡೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಭಾಗಮಂಡಲ ವ್ಯಾಪ್ತಿಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದ್ದು, ಭಾಗಂಡಲ ತ್ರೀವೇಣಿ ಸಂಗಮ ಭರ್ತಿಯಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

Join Whatsapp
Exit mobile version