ಮಡಿಕೇರಿ: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭಾಗಮಂಡಲ – ಕರಿಕೆ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದೆ.
ಕರಿಕೆ ರಸ್ತೆಯ ಬಾಚಿಮಲೆ ಬಳಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಸಾಲುಗಟ್ಟಿ ನಿಂತ ವಾಹನಗಳು, ಸಂಚಾರ ಸ್ತಬ್ಧಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇನ್ನೂ ಸ್ಥಳಕ್ಕೆ ಆಗಮಿಸದೇ ಇರುವುದು ಸಾರ್ವಜನಿಕರಲ್ಲಿ ಆಕ್ರೋಶವುಂಟುಮಾಡಿದೆ.