ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಬೇತ್ರಿ ಸೇತುವೆಯಲ್ಲಿ ನದಿ ನೀರು ಅಪಾಯದಮಟ್ಟ ಮೀರಿ ಹರಿಯುತ್ತಿದೆ.
ಭಾಗಮಂಡಲ– ಕರಿಕೆ ಭಾಗದಲ್ಲಿ ಮತ್ತೆ ಭೂ ಕುಸಿತವುಂಟಾಗಿದ್ದು, ಮಡಿಕೇರಿ–ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಕುಂಬೂರು ಬಳಿಯೂ ಭೂಕುಸಿತವಾಗಿದೆ.
ವಿರಾಜಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 14, ಮಡಿಕೇರಿ ತಾಲ್ಲೂಕಿನ ಗಾಳಿಬೀಡು, ಬೆಂಗೂರಿನಲ್ಲಿ 13, ಭಾಗಮಂಡಲದಲ್ಲಿ 12.5, ಬಲ್ಲಮಾವಟಿ, ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ 12 ಸೆಂ.ಮೀನಷ್ಟು ಮಳೆಯಾಗಿದೆ ಎಂದು ತಿಳಿದು ಬಂದಿದೆ.
ಮತ್ತೆ ಭಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.