ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಭಾರೀಮಳೆ ಸುರಿದಿದ್ದು,ಕಿಂಡಿ ಅಣೆಕಟ್ಟಿಗೆ ಮರದ ದಿಮ್ಮಿಗಳು ಸಿಲುಕಿ ಹಲವು ಮನೆಗಳಿಗೆ ನೀರು ನುಗ್ಗಿದೆ.
ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪಗಳಂತಾಗಿದ್ದು, ಅಪಾಯಕಾರಿ ಸ್ಥಳದಲ್ಲಿ ವಾಸ ಮಾಡುತ್ತಿರುವವರನ್ನು ಕಾಳಜಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಸಂಪಾಜೆ ಹಾಗೂ ಭಾಗಮಂಡಲದಲ್ಲಿ 10 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ. ಜಿಲ್ಲಾಧಿಕಾರಿ ಡಾ.ಬಿ.ಸಿಸತೀಶ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.