ಮಡಿಕೇರಿ: ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯಿಂದ ಎರಡು ದಿನಗಳ (ಜುಲೈ15,16) ರಜೆ ಘೋಷಿಸಿ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೊರತೆಯಾದ ಶಾಲಾ ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಬೇಕು ಎಂದು ವಿರಾಜಪೇಟೆ ತಾಲೂಕು ಸಾರ್ವಜನಿಕ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ.