ಮಡಿಕೇರಿ: ಗಾಳಿ – ಮಳೆಗೆ ಮನೆಯೊಂದು ಕುಸಿದು ಬಿದ್ದಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ನಲ್ಲಿ ನಡೆದಿದೆ.
ಹಾನಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಅಕ್ಬರ್ ಅಲಿ ಅವರ ಮನೆ ಗುರುವಾರ ಮಧ್ಯರಾತ್ರಿ ಕುಸಿದು ಬಿದ್ದಿದೆ.
ಮನೆ ಕುಸಿಯುತ್ತಿರುವ ಶಬ್ಧಕ್ಕೆ ಮನೆಯಲ್ಲಿದ್ದವರು ಹೊರಗೆ ಓಡಿ ಹೋಗಿದ್ದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.