ಕೊಡಗು ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಎಡಪ್ಪಾಲ ಮಹ್ಮೂದ್ ಮುಸ್ಲಿಯಾರ್ ನಿಧನ

Prasthutha|

ಕೊಡಗು: ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಎಡಪ್ಪಾಲ ಮಹ್ಮೂದ್ ಮುಸ್ಲಿಯಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ವೃದ್ಧಾಪ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.


ನಾಪೊಕ್ಲು, ಎಡಪಾಲ, ಮೂರ್ನಾಡ್, ವಿರಾಜಪೇಟೆ, ಎಮ್ಮೆಮಾಡು, ಮೈಸೂರು ಮುಂತಾದ ಕಡೆ ಮುದರ್ರಿಸ್, ಖತೀಬರಾಗಿ ಸೇವೆ ಸಲ್ಲಿಸಿದ್ದ ಮಹ್ಮೂದ್ ಮುಸ್ಲಿಯಾರ್, ಪ್ರತ್ಯೇಕ ಮದ್ರಸ ಸಿಲೆಬಸ್ ರಚಿಸಿ “ಕೊಡಗು ಜಿಲ್ಲಾ ಇಸ್ಲಾಂ ವಿದ್ಯಾಭ್ಯಾಸ ಸಂಸ್ಥೆ” ಎಂಬ ಹೆಸರಲ್ಲಿ ವಿದ್ಯಾಭ್ಯಾಸ ಬೋರ್ಡನ್ನು ಸ್ಥಾಪಿಸಿ ಧಾರ್ಮಿಕ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ನೂರಾರು ಶಿಷ್ಯಂದಿರನ್ನು ಸೃಷ್ಟಿಸಿದ್ದ ಉಸ್ತಾದರು, ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೂ ಸಮಾನ ಪ್ರಾಶಸ್ತ್ಯ ನೀಡಿದ್ದರು.

- Advertisement -


ಉಸ್ತಾದರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವು ಸಂಘಟನೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -