ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಫೆ.10 ರಂದು “ಮಾಧವಿ” ಕನ್ನಡ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್‍ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಸಂಜೆ 6.30 ಗಂಟೆಗೆ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದಲ್ಲಿ ನಾಟಕ ಪ್ರದರ್ಶನಗೊಳ್ಳಲಿದ್ದು, ಬೆಂಗಳೂರಿನ ಕೈವಲ್ಯ ಕಲಾಕೇಂದ್ರದ ಕಲಾವಿದರು ನಾಟಕ ಪ್ರದರ್ಶನ ನೀಡಲಿದ್ದಾರೆ. ನಾಟಕ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಸುಧಾ ಆಡುಕಳ ರಚನೆಯ ಈ ನಾಟಕವನ್ನು ಡಾ.ಶ್ರೀಪಾದ್ ಭಟ್ ನಿರ್ದೇಶನ ಮಾಡಿದ್ದು, ಗಣೇಶ ಎಂ. ಭಿಮನಕೋಣೆ ಸಹನಿರ್ದೇಶನ ಮಾಡಿದ್ದಾರೆ. ರಾಜ್ಯದ ಮೊದಲ ಮಹಿಳಾ ಚಂಡೆವಾದಕಿ ದಿವ್ಯಶ್ರೀ ನಾಯಕ್ ಸುಳ್ಯ, ಕೊಡಗಿನ ಉದಯೋನ್ಮುಖ ರಂಗಭೂಮಿ ಯುವ ಕಲಾವಿದ ಮಾಚಂಗಡ ಶರತ್ ಬೋಪಣ್ಣ ಅಭಿನಯಿಸಿದ್ದಾರೆ.