Home ಟಾಪ್ ಸುದ್ದಿಗಳು ಕೊಡಗು: ಬುರ್ಖಾ ಡ್ಯಾನ್ಸ್ ವಿರುದ್ಧ ಮುಸ್ಲಿಂ ಮುಖಂಡರ ಅಕ್ರೋಶ

ಕೊಡಗು: ಬುರ್ಖಾ ಡ್ಯಾನ್ಸ್ ವಿರುದ್ಧ ಮುಸ್ಲಿಂ ಮುಖಂಡರ ಅಕ್ರೋಶ

ಮಡಿಕೇರಿ: ರಾಜ್ಯದಲ್ಲಿ ಹಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಿಜಾಬ್ ವಿವಾದದ, ಬೆನ್ನಲ್ಲೇ ಇದೀಗ ನಾಪೋಕ್ಲು ವಿನ ಕೊಳಕೇರಿ ಗ್ರಾಮದಲ್ಲಿ ಬುರ್ಖಾ ಹಾಕಿ ಕೆಲ ಯುವಕರು ನೃತ್ಯ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಕೊಳಕೇರಿ ಗ್ರಾಮಾಭಿವೃದ್ದಿ ಸಂಘದ ವಜ್ರಮಹೋತ್ಸವ ಆಚರಣೆಯ ವೇಳೆ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಕೆಲ ಯುವಕರು ಬುರ್ಖಾ ಹಾಕಿ ಕೊಡವ ವಾಲಗಕ್ಕೆ ನೃತ್ಯ ಮಾಡಿದ್ದರು.

ಸದ್ಯ ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಧಾರ್ಮಿಕ ಉಡುಪುಗಳಿಗೆ ಅಪಮಾನ ಮಾಡಲಾಗಿದೆ ಎಂದು ಜಿಲ್ಲೆಯ ಮುಸ್ಲಿಂ ಸಮುದಾಯದ ಮುಖಂಡರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ   ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version