ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ನವ ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತೂಪನಕೊಲ್ಲಿ ತೋಟದ ನಿವಾಸಿ ವಸಂತಿ ಎಂಬವರ ಮಗಳು ಚಿತ್ರ (26) ಆತ್ಮಹತ್ಯೆ ಮಾಡಿಕೊಂಡವರು.
ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಮೂರ್ನಾಡಿನ ಹರೀಶ ಅವರೊಂದಿಗೆ ಚಿತ್ರ ಅವರ ವಿವಾಹವಾಗಿತ್ತು.