ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ಬದಲಾವಣೆ-RTCಯಲ್ಲಿ ಪಟ್ಟೆದಾರ ಮತ್ತು ಅವರ ಕುಟುಂಬಸ್ಥರ ಹೆಸರು ನಮೂದಿಸುವ ಸಂಬAಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸುವ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಕೊಡಗು ಜಿಲ್ಲೆಯಲ್ಲಿ ಈ ಹಿಂದೆ ಜಮಾಬಂಧಿ ಚಾಲ್ತಿಯಲ್ಲಿತ್ತು, ೨೦೦೦ ಇಸವಿಯಿಂದ ರ‍್ಟಿಸಿ ಚಾಲ್ತಿಗೆ ಬಂದ ನಂತರ ಪಟ್ಟೆದಾರಿಕೆ ಹಾಗೂ ಪೌತಿ ವಾರಸುದಾರರ ಬದಲಾವಣೆ ವಿಷಯದಲ್ಲಿ ಗೊಂದಲ ಹಾಗೂ ಸಮಸ್ಯೆಗಳ ಬಗ್ಗೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಬೆಳಕು ಚೆಲ್ಲಿದ್ದು, ಆ ದಿಸೆಯಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾಹಿತಿ ನೀಡುವಂತೆ ಕೋರಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ ಅವರು ಕೊಡಗು ಜಿಲ್ಲೆಯಲ್ಲಿ ಶೇ.೬೦ ರಿಂದ ೭೦ ರಷ್ಟು ಭೂಮಿ ಪಟ್ಟೆದಾರರ ಹೆಸರಿನಲ್ಲಿದೆ. ನಮೂನೆ ೬ ರಲ್ಲಿ ಹಿಡುವಳಿದಾರರ ಹೆಸರು ಇರುತ್ತದೆ. ಆದರೆ ಪಟ್ಟೆದಾರರು ತೀರಿಕೊಂಡಿದ್ದಲ್ಲಿ ಪಟ್ಟೆದಾರರ ಹೆಸರನ್ನು ತೆಗೆದುಹಾಕಿ ಹಿಡುವಳಿದಾರರ ಹೆಸರನ್ನು ಸೇರ್ಪಡೆ ಮಾಡಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜುಮೊಗವೀರ, ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಸಹಕಾರ ಇಲಾಖೆಯ ಉಪ ನಿಬಂಧಕರಾದ ಸಲೀಮ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ, ತಹಶೀಲ್ದಾರ್ ಮಹೇಶ್ ಅವರು ಇದ್ದರು.