ಮಡಿಕೇರಿ: ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿಗೆ ಆಗ್ರಹಿಸಿ ಕೊಡ್ಲಿಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ಪೋಷಕರು ಧರಣಿ ನಡೆಸಿದರು.
ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡದ ಶಿಕ್ಷಣ ಇಲಾಖೆಯ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟವರು ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ ಪೋಷಕರು ಮಳೆ, ಗಾಳಿ ಯನ್ನು ಲೆಕ್ಕಿಸದೆ ಬೆಳಿಗ್ಗೆಯಿಂದ ಶಾಲೆಯ ಮುಂಭಾಗದಲ್ಲಿ ಧರಣಿ ಕುಳಿತರು.
ಆಂಗ್ಲ ಮಾದ್ಯಮಕ್ಕೆ ಅನುಮತಿ ನೀಡುವ ಭರವಸೆಯಿಂದ ಪ್ರಸಕ್ತ ಸಾಲಿನಲ್ಲಿ ಮೂವತ್ತು ವಿದ್ಯಾರ್ಥಿಗಳನ್ನು ಒಂದನೇ ತರಗತಿಗೆ ಸೇರ್ಪಡೆ ಮಾಡಲಾಗಿದೆ.