ಕೊಡಗು: ಭೂಮಿಯ ಒಳಗೆ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿದ ಪೊಲೀಸ್ ಶ್ವಾನ

Prasthutha|

ಕೊಡಗು: ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿದ ‘ಕಾಪರ್’ ಎಂಬ ಶ್ವಾನ ಆರೋಪಿ ಮನೆಯ ಶೌಚಾಲಯದ ಹಿಂಭಾಗದಲ್ಲಿ ಭೂಮಿಯ ಒಳಗೆ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿ ತನಿಖೆಗೆ ಬಹುಮುಖ್ಯ ಕೊಡುಗೆ ನೀಡಿದ ಘಟನೆ ನಡೆದಿದೆ.

- Advertisement -

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು, ಬಳಕೆ ಹಾಗೂ ಮಾರಾಟದ ಬಗ್ಗೆ ಸ್ಥಳೀಯ ಪೊಲೀಸ್​ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿತ್ತು. ಮಾದಕ ವಸ್ತುಗಳ ಮಾರಾಟ ತಡೆಗಟ್ಟುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ಉಪವಿಭಾಗದ ಡಿಎಸ್​ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರದ ಸಿಪಿಐ ರಾಜೇಶ್.ಕೆ ಹಾಗೂ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್​ಐ ಮೋಹನ್ ರಾಜು.ಪಿ ಮತ್ತು ಸಿಬ್ಬಂದಿ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿತ್ತು.

ಮಾರ್ಚ್​​ 17 ರಂದು ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದಕಂಡಿ ಎಂಬಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಟ ಹಾಗೂ ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿ, ದ್ವಿ-ಚಕ್ರ ವಾಹನದ ಜತೆಗೆ 245 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿತ್ತು.

- Advertisement -

37 ವರ್ಷದ ಬಸವರಾಜು ಬಂಧಿತ ವ್ಯಕ್ತಿ. ಪಿರಿಯಾಪಟ್ಟಣ ತಾಲ್ಲೂಕು ದೊಡ್ಡಹೊಸೂರು ಗ್ರಾಮದ ನಿವಾಸಿ.

ಕೊಡಗು ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿದ ‘ಕಾಪರ್’ ಎಂಬ ಶ್ವಾನವು ಆರೋಪಿ ಮನೆಯ ಶೌಚಾಲಯದ ಹಿಂಭಾಗದಲ್ಲಿ ಭೂಮಿಯ ಒಳಗೆ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

Join Whatsapp