ಮಡಿಕೇರಿ: ಜಿಲ್ಲೆಯಲ್ಲಿ ಆನೆ, ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿದ್ದು, ಇದೀಗ ಜಿಲ್ಲೆಯ ವಿವಿಧೆಡೆಯ ಶಾಲೆಗಳ ಪಕ್ಕದಲ್ಲೇ ಕಾಡಾನೆಗಳು ಓಡಾಡುತ್ತಿರುವುದರಿಂದ ಪೋಷಕರು ಮತ್ತು ಮಕ್ಕಳು ಆತಂಕದಲ್ಲಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕೆಂದು ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷ ಕಲೀಲ್ ಆಗ್ರಹಿಸಿದ್ದಾರೆ.
ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಸರಕಾರಿ ಶಾಲೆಯ ಸಮೀಪದಲ್ಲಿ ಹಾಗೂ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಸರಕಾರಿ ಶಾಲೆಯ ಪಕ್ಕದಲ್ಲೇ ಕಾಡಾನೆಗಳ ಓಡಾಟ ಹೆಚ್ಚಾಗಿದೆ. ಅನಾಹುತ ಸಂಭವಿಸುವುದಕ್ಕಿಂತ ಮುಂಚಿತವಾಗಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯ ಮಾಡಬೇಕಾಗಿದೆ. ಹಾಗೂ ಶಾಲೆಗಳ ಸಮೀಪದಲ್ಲಿ ಆರ್.ಆರ್.ಟಿ ತಂಡವನ್ನು ನಿಯೋಜಿಸಬೇಕೆಂದು ಕಲೀಲ್ ಮಡಿಕೇರಿ ಆಗ್ರಹಿಸಿದ್ದಾರೆ.